ಜಿ.ಎಸ್.ಶಿವರುದ್ರಪ್ಪ ಜನ್ಮದಿನದ ಹಿನ್ನೆಲೆ ವಿಶೇಷ ಕಾರ್ಯಕ್ರಮ 

ಶಿವಮೊಗ್ಗ : ನಮ್ಮ ಹೆಮ್ಮೆಯ ರಾಷ್ಟ್ರಕವಿಗಳಲ್ಲಿ ಡಾ.ಜಿ.ಎಸ್.ಶಿವರುದ್ರಪ್ಪ ಕೂಡ ಒಬ್ಬರು. ಕನ್ನಡ ನಾಡು ನುಡಿಗೆ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ. ಇಂಥಹ ಮಹಾನ್ ಕವಿಯ ಜನ್ಮದಿನದ ಅಂಗವಾಗಿ ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನದ ವತಿಯಿಂದ ಕಾವ್ಯಸೌರಭ ಜಿ.ಎಸ್.ಶಿವರುದ್ರಪ್ಪ ಎಂಬ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಶನಿವಾರ ಸಂಜೆ 6 ಗಂಟೆಗೆ ಕರ್ನಾಟಕ ಸಂಘದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸುಬ್ಬಯ್ಯ ವೈದ್ಯಕೀಯ ಸಮೂಹ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ವಿನಯ್ ಶ್ರೀನಿವಾಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಪ್ರತಿ ವರ್ಷದಂತೆ ಈ ಸಲವೂ ಸಂಗೀತ,ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಜಿ.ಎಸ್.ಎಸ್. ಪುರಸ್ಕಾರ ನೀಡಲಾಗುತ್ತದೆ. ಈ ಬಾರಿಯ ಜಿ.ಎಸ್.ಎಸ್. ಪ್ರಶಸ್ತಿಯನ್ನು ಬೆಂಗಳೂರು ಮಹಾರಾಣಿ ಕಾಲೇಜಿನ ಪ್ರಾಧ್ಯಾಪಕಿ, ವಿಮರ್ಶಕಿ ಹಾಗೂ ಸಂಸ್ಕೃತಿ ಚಿಂತಕಿ ಡಾ.ಎಂ.ಎಸ್.ಆಶಾದೇವಿ ಅವರಿಗೆ ನೀಡಿ ಗೌರವಿಸಲಾಗುವುದು.

ತರಿಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯರಾದ ಸಬಿತಾ ಬನ್ನಾಡಿ ಜಿ.ಎಸ್.ಎಸ್.ಸಾಹಿತ್ಯದ ಚಿಂತನಾ ನುಡಿಗಳನ್ನಾಡಿದ್ದಾರೆ. ಮಖ್ಯ ಅತಿಥಿಗಳಾಗಿ ಕರ್ನಾಟಕ ಸಂಘದ ಅಧ್ಯಕ್ಷ ಸುಂದರಾಜ್.ಎಂ.ಎನ್ ಆಗಮಿಸಲಿದ್ದಾರೆ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಜಿ.ಎಸ್.ಎಸ್. ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ.ಕಿರಣ್ ಆರ್.ದೇಸಾಯಿ ವಹಿಸಿಕೊಳ್ಳಲಿದ್ದಾರೆ ಎಂದು ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನ ವತಿಯಿಂದ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.