ಶಿವಮೊಗ್ಗ : ರೈತ ಹೋರಾಟಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಹೋರಾಟಗಾರ ಅಂದ್ರೆ ಅದು ಹೆಚ್.ಆರ್.ಬಸವರಾಜಪ್ಪ. ಇದೀಗ ಅವರ ಐದು ದಶಕಗಳ ರೈತ ಹೋರಾಟದ ಕುರಿತಾದ ಪುಸ್ತಕವೊಂದು ಸಿದ್ಧವಾಗಿದೆ. ಹಸಿರು ಹಾದಿಯ ಕಥನ ಎಂಬ ಹೆಸರಿನ ಈ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಮೇ 25 ರಂದು ಬಿಡುಗಡೆಯಾಗಲಿದೆ.
ಈ ಸಂಬಂಧ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ರೈತ ಮುಖಂಡ ಹೆಚ್.ಆರ್.ಬಸವರಾಜಪ್ಪ, ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಪುಸ್ತಕ ಬಿಡುಗಡೆ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ವಹಿಸಿಕೊಳ್ಳಲಿದ್ದಾರೆ. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸಾಕ್ಷ್ಯಚಿತ್ರಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಡಿಹಳ್ಳಿ ಚಂದ್ರಶೇಖರ್ ವಹಿಸಿಕೊಳ್ಳಲಿದ್ದಾರೆ.
ಹಾಗೇನೆ ಈ ಕಾರ್ಯಕ್ರಮದಲ್ಲಿ ಹಿರಿಯ ರೈತ ಹೋರಾಟಗಾರರಾದ ಕಡಿದಾಳು ಶಾಮಣ್ಣ ಹಾಗೂ ಡಾ.ಬಿ.ಎಂ.ಚಿಕ್ಕಸ್ವಾಮಿ ಅವರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.