ಫೆಬ್ರವರಿ 19 ರಂದು ಹೈಕೋರ್ಟ್, ವಿಧಾನಸೌಧ ಚಲೋ 

ಶಿವಮೊಗ್ಗ : ಗಣರಾಜ್ಯೋತ್ಸವ ದಿನಾಚರಣೆಯಂದು ಅಂಬೇಡ್ಕರ್‌ಗೆ ಅವಮಾನ ಮಾಡಿರುವ ರಾಯಚೂರಿನ ನ್ಯಾಯಾಧೀಶರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆ ದಲಿತ ಸಂಘರ್ಷ ಸಮಿತಿಯ ವತಿಯಿಂದ ಫೆಬ್ರವರಿ 19ರಂದು ಹೈಕೋರ್ಟ್ ಹಾಗೂ ವಿಧಾನಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಮೂರ್ತಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲಾ ನ್ಯಾಯಾಲಯದ ಹಾಲ್‌ನಲ್ಲಿ ಅಂಬೇಡ್ಕರ್ ಅವರ ಫೋಟೋ ಕಡ್ಡಾಯವಾಗಿ ಇರಬೇಕು. ಕಾನೂನಿನ ಎಲ್ಲಾ ಹಂತದಲ್ಲಿಯೂ ಮೀಸಲಾತಿಯನ್ನ ಕಡ್ಡಾಯವಾಗಿ ಪಾಲಿಸಬೇಕು ಎಂದು ಒತ್ತಾಯಿಸಿದರು. ಹಾಗೇಯೇ ರಾಯಚೂರು ನ್ಯಾಯಾಧೀಶರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವವರೆಗೂ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಸಿದರು.