ಬೆಂಗಳೂರು : ಹಿಜಾಬ್ ವಿವಾದದ ಕುರಿತು ಯಾವುದೇ ಮಧ್ಯಂತರ ಆದೇಶ ನೀಡದ ಹೈಕೋರ್ಟ್, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ಈ ಪ್ರಕರಣವನ್ನ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದಾರೆ.
ಮಧ್ಯಂತರ ಆದೇಶವನ್ನು ಕೂಡ ವಿಸ್ತೃತ ಪೀಠವೇ ನೀಡಲಿದೆ. ವಿಸ್ತೃತ ಪೀಠ ರಚಿಸುವ ಬಗ್ಗೆ ಹೈಕೋರ್ಟ್ ಸಿಜೆ ತೀರ್ಮಾನಿಸಲಿದ್ದಾರೆ. ಈ ಪ್ರಕರಣ ವಿಸ್ತೃತ ಪೀಠದಲ್ಲಿ ವಿಚಾರಣೆಗೆ ಯೋಗ್ಯವಾಗಿದೆ. ಈ ಬಗ್ಗೆ ಹೈಕೋರ್ಟ್ ಸಿಜೆ ವಿವೇಚನಾಧಿಕಾರ ಹೊಂದಿದ್ದಾರೆ. ತಕ್ಷಣವೇ ಸಂಪೂರ್ಣ ಕಡತ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿ ಎಂದು ಹೈಕೋರ್ಟ್ ರಿಜಿಸ್ಟ್ರಾರ್‌ಗೆ ನ್ಯಾಯಮೂರ್ತಿಗಳು ನಿರ್ದೇಶನ ನೀಡಿದ್ದಾರೆ. ಅರ್ಜಿದಾರರು ಮುಂದಿನ ವಿಚಾರಣೆ ವೇಳೆ ಮನವಿ ಸಲ್ಲಿಸಬಹುದು. ಮಧ್ಯಂತರ ಆದೇಶದ ಬಗ್ಗೆ ಮನವಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.