ಸಂತೋಷ್ ಪಾಟೀಲ್ ಪ್ರಕರಣದ ಪಾರದರ್ಶಕ ತನಿಖೆ ನಡೆಯುತ್ತಿದೆ : ಗೃಹ ಸಚಿವ 

ಶಿವಮೊಗ್ಗ : ಈಶ್ವರಪ್ಪಗೆ ರಾಜೀನಾಮೆ ನೀಡುವಂತೆ ಹೈಕಮಾಂಡ್‌ನಿಂದ ಯಾವುದೇ ಒತ್ತಡ ಬಂದಿಲ್ಲ. ಸರ್ಕಾರಕ್ಕೆ ಮುಜಗರವಾಗಬಾರದು ಹಾಗೂ ಪ್ರಕರಣದ ತನಿಖೆಗೆ ಯಾವುದೇ ಅಡಚಣೆ ಆಗಬಾರದೆಂದು ಅವರೇ ಸ್ವಯಂ ನಿರ್ಧಾರದಿಂದ ರಾಜೀನಾಮೆ ನೀಡಿದ್ದಾರೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಯಾವುದೇ ಡೆತ್ ನೋಟ್ ಬರೆದಿಲ್ಲ. ವಾಟ್ಸಪ್ ಸಂದೇಶವನ್ನು ಕಳುಹಿಸಿದ್ದಾರೆ. ಅದನ್ನು ಅವರೇ ಟೈಪ್ ಮಾಡಿದ್ದಾರ?, ಇದರ ಹಿಂದೆ ಯಾರಿದ್ದಾರೆ? ಎಲ್ಲದರ ಕುರಿತು ಪಾರದರ್ಶಕವಾಗಿ ತನಿಖೆ ನಡೆಯಲಿದೆ ಎಂದರು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ನಡೆಸ್ತಾಯಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮುಳುಗೋನಿಗೆ ಹುಲ್ಲುಕಡ್ಡಿ ಆಧಾರ ಎಂಬಂತೆ ಕಾಂಗ್ರೆಸ್‌ನವರಿಗೆ ಈ ವಿಷಯ ಸಿಕ್ಕಿದೆ. ಆದ್ರೆ ಈ ವಿಚಾರವನ್ನು ಇಟ್ಟುಕೊಂಡು ಕಾಂಗ್ರೆಸ್‌ನವರು ರಾಜಕೀಯವಾಗಿ ಯಾವುದೇ ಲಾಭಗಳಿಸಲು ಸಾಧ್ಯವಾಗಲ್ಲ ಎಂದರು.