ಶಿವಮೊಗ್ಗ : ಮಳೆ ಏನೋ ನಿಂತಿದೆ ಆದ್ರೆ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರ ಗೋಳು ಮಾತ್ರ ಇನ್ನೂ ನಿಂತಿಲ್ಲ. ಈ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಳೆಯಿಂದ ಹಾನಿಗಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು.
ಬಾಪೂಜಿ ನಗರ, ಮಹಾದೇವಿ ಟಾಕೀಸ್ ಹಾಗೂ ಕೆ.ರಾಮಯ್ಯ-ಹೇಮಾಶ್ರೀ ಬಡಾವಣೆಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಈ ವೇಳೆ ಅಲ್ಲಿನ ನಿವಾಸಿಗಳು ಮಳೆಯಿಂದಾದ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸುವಂತೆ ಮನವಿ ಪತ್ರ ಸಲ್ಲಿಸದರು.
ಗೃಹ ಸಚಿವರ ಜೊತೆಗೆ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಮಹಾನಗರ ಪಾಲಿಕೆ ಮೇಯರ್ ಸುನೀತ ಅಣ್ಣಪ್ಪ, ಪಾಲಿಕೆ ಆಯುಕ್ತ ಮಾಯಣ್ಣಗೌಡ ಹಾಗೂ ಮತ್ತಿತರರ ಅಧಿಕಾರಿಗಳು ಮುಖಂಡರು ಸ್ಥಳ ಪರಿಶೀಲನೆಯಲ್ಲಿ ಭಾಗಿಯಾಗಿದ್ದರು.