ಕಾಂಗ್ರೆಸ್ ಕಚೇರಿಯಲ್ಲಿ ಹುತಾತ್ಮ ದಿನಾಚರಣೆ 

ಶಿವಮೊಗ್ಗ : ಕಾಂಗ್ರೆಸ್ ಕಚೇರಿಯಲ್ಲಿ ಹುತಾತ್ಮ ದಿನಾಚರಣೆ ಆಚರಿಸಿಲಾಯಿತು. ಗಾಂಧೀಜಿಯ ಪುಣ್ಯ ತಿಥಿಯ ಅಂಗವಾಗಿ ಕಾಂಗ್ರೆಸ್ ನಾಯಕರು, ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಸಭೆ ನಡೆಸಿ ರಾಷ್ಟ್ರ ಪಿತನನ್ನು ನೆನೆದರು.

ಈ ವೇಳೆ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಸೇವಾದಳ ಅಧ್ಯಕ್ಷ ವೈ.ಹೆಚ್.ನಾಗರಾಜ್, ಸೂಡ ಮಾಜಿ ಅಧ್ಯಕ್ಷ ಎನ್.ರಮೇಶ್, ಮಾಜಿ ಶಾಸಕ ಹೆಚ್.ಸಿ.ಚಂದ್ರಶೇಖರಪ್ಪ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರವಿ ಕುಮಾರ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.