ಯುವ ಕಾಂಗ್ರೆಸ್‌ನಿಂದ ಗಾಂಧೀಜಿ ಪುಣ್ಯಸ್ಮರಣೆ 

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿಯವರ ೭೪ನೇ ಪುಣ್ಯಸ್ಮರಣೆಯನ್ನ ಆಚರಿಸಲಾಗಿದೆ. ನಗರದ ಗಾಂಧಿ ಪಾರ್ಕಿನಲ್ಲಿನ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಅರ್ಪಿಸಿ ಗಾಂಧೀಜಿಗೆ ಗೌರವ ಸಲ್ಲಿಸಲಾಯಿತು.

ಈ ವೇಳೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.