ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ 

ನ್ಯೂಜಿಲ್ಯಾಂಡ್ : ವನಿತೆಯರ ಏಕದಿನ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಮಿಥಾಲಿ ರಾಜ್ ನೇತೃತ್ವದ ಭಾರತೀಯ ತಂಡ ಭರ್ಜರಿ ಗೆಲುವು ದಾಖಲಿಸಿದ್ದು, ವಿಶ್ವಕಪ್ ಅಭಿಯಾನದಲ್ಲಿ ಶುಭಾರಂಭ ಮಾಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಭಾರತ ತಂಡ 50 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 244 ರನ್ ಗಳಿಸಲಷ್ಟೆ ಶಕ್ತವಾಯಿತು. ಬಳಿಕ ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ ತಂಡ 42 ಓವರ್‌ಗಳಲ್ಲಿ 137 ರನ್‌ಗಳಿಗೆ ಆಲ್ ಔಟ್ ಆಯಿತು. ಈ ಮೂಲಕ ಭಾರತೀಯ ತಂಡ 107ರನ್‌ಗಳ ಭರ್ಜರಿ ಜಯ ದಾಖಲಿಸಿತು.

ಭಾರತದ ಪರ ಬ್ಯಾಟಿಂಗ್‌ನಲ್ಲಿ ಪೂಜಾ ವಸ್ತ್ರಾಕರ್, ಸ್ಮೃತಿ ಮಂಧಾನಾ, ಸ್ನೇಹ್ ರಾಣಾ, ದೀಪ್ತಿ ಶರ್ಮ ಮಿಂಚಿದರೆ, ಬೌಲಿಂಗ್‌ನಲ್ಲಿ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ 4ವಿಕೆಟ್ ಗಳಿಸಿ ಪಾಕಿಸ್ತಾನ ತಂಡದ ಬ್ಯಾಟಿಂಗ್ ಶಕ್ತಿಗೆ ಪೆಟ್ಟು ನೀಡದರು.