ಶಿವಮೊಗ್ಗ : ಎನ್.ಸಿ.ವಿ.ಟಿ ಯಿಂದ ಸಂಯೋಜನೆಗೊಂಡು 7 ವರ್ಷ ಪೂರೈಸಿರುವ ಎಲ್ಲಾ ಖಾಸಗಿ ಕೈಗಾರಿಕಾ ತರಬೇತಿ ಸಿಬ್ಬಂದಿಗಳಿಗೆ ಸಿಬ್ಬಂದಿ ಆಧಾರಿತ ವೇತನಾನುದಾನದ ಮೂಲಕ ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಐಟಿಐ ಆಡಳಿತ ಮಂಡಳಿಗಳ ಸಂಘ ಜಿಲ್ಲಾಧಿಕಾರಿ ಆವರಣದಲ್ಲಿ ಪ್ರತಿಭಟನೆ ನಡೆಸಿದೆ.
2010ರಲ್ಲಿ ಜಾರಿಗೆ ತಂದಿರುವ ವಿದ್ಯಾರ್ಥಿ ಕೇಂದ್ರೀಕೃತ ಅನುದಾನ ಪದ್ಧತಿಯನ್ನು ರದ್ದು ಮಾಡಬೇಕು. 1997ರ ಅನುದಾನ ಸಂಹಿತೆಯಂತೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಸಿಬ್ಬಂಧಿಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಈ ಕುರಿತು 15 ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೆವು. ಆವರು ಏಳು ದಿನದಲ್ಲಿ ಈ ಕುರಿತು ಕ್ರಮ ಕೈಗೊಳ್ಳುವಂತೆ ಭರವಸೆ ನೀಡಿದ್ದರು. ಆದರೆ ಸಿಎಂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮತ್ತೊಮ್ಮೆ ಜಿಲ್ಲಾಧಿಕಾರಿ ಮೂಲಕ ಮನವಿ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.