ಶಿವಮೊಗ್ಗ : ಎಪಿಎಂಸಿ ಅಧ್ಯಕ್ಷರ ಸ್ಥಾನಕ್ಕೆ ಟಿ.ಬಿ. ಜಗದೀಶ್ ಅವಿರೋಧ ಆಯ್ಕೆಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ತಲಾ ಮೂರು ತಿಂಗಳ ಅವಧಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿತ್ತು
. ಈ ಹಿಂದೆ ಮಹೇಶ್ ಅಧ್ಯಕ್ಷರಾಗಿದ್ದರು. ಇದೀಗ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಟಿ.ಬಿ. ಜಗದೀಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಾರ್ಚ್ 2022 ವರಗೆ ಎರಡು ಪಕ್ಷಗಳ ನಡುವೆ ಒಡಂಬಡಿಕೆಯಾಗಿ ತಲಾ ಮೂರು ತಿಂಗಳು ಅಧ್ಯಕ್ಷ ಸ್ಥಾನವನ್ನು ಹಂಚಿಕೊಂಡಿದ್ದರು. ಅದರಂತೆ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ. ಇನ್ನು ಉಪಾಧ್ಯಕ್ಷರಾಗಿ ಬಾಲಕೃಷ್ಣ ಭಟ್ ಮುಂದುವರಿಯಲಿದ್ದಾರೆ.