ಜೆಡಿಎಸ್ ಮಹಿಳಾ ಘಟಕಗಳಿಗೆ ಹೆಚ್ಚಿನ ಜವಾಬ್ದಾರಿ 

ಶಿವಮೊಗ್ಗ: ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲು ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ತೊಡಗಿದೆ.

ಇದಕ್ಕಾಗಿ ಕ್ಷೇತ್ರವಾರು ಮಹಿಳಾ ಘಟಕಗಳಿಗಳಿಗೆ ಮೂರು ತಿಂಗಳ ಅವಧಿಗೆ ಕೈಗೊಳ್ಳಬೇಕಿರುವ ಕಾರ್ಯತಂತ್ರಗಳ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್ ತಿಳಿಸಿದರು. ಸುದದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೨೩ರ ಚುನಾವಣೆಗೆ ಕ್ಷೇತ್ರದಿಂದ ಆಯ್ಕೆಯಾಗುವ ಶಾಸಕ ಪ್ರತಿನಿಧಿಯೊಂದಿಗೆ ಸಭೆ ನಡೆಸಿ ಮಾಹಿತಿ ನೀಡುವುದು, ಜೆಡಿಎಸ್ ಸ್ವತಂತ್ರ ಸರ್ಕಾರ ತರು ಬಗ್ಗೆ ತಮ್ಮ ಸಂಘಟನೆಯಿAದ ಏರ್ಪಡಿಸಿದ ಕಾರ್ಯಕ್ರಮದ ಬಗ್ಗೆ ವರದಿ ನೀಡುವುದು ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಘಟಕಗಳನ್ನು ರೂಪಿಸಿ ಸದಸ್ಯರ ವಿವರ ನೀಡುವುದು ಸೇರಿದಂತೆ ಹೆಚ್ಚಿನ ಪ್ರಚಾರ ಮಾಡಲು ಸೂಚಿಸಲಾಗಿದೆ ಎಂದು ತಿಳೀಸಿದ್ರು.