ಬೆಂಗಳೂರು : ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ಸಿ.ಎಂ. ಇಬ್ರಾಹಿಂ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ನಿರ್ಗಮಿತ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅಧಿಕಾರ ಹಸ್ತಾಂತರಿಸಿದರು.
ಈ ವೇಳೆ ಸಿ.ಎಂ.ಇಬ್ರಾಹಿಂ ಮಾತನಾಡಿ, ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಕಾಂಗ್ರೆಸ್ ತಪ್ಪು ಮಾಡಿದ ಕಾರಣ ಅಂದು ದೇವೇಗೌಡರು ಪಿಎಂ ಆದ್ರು. ೨೦೨೩ರಲ್ಲಿ ಅದೇ ತಪ್ಪು ಮಾಡುತ್ತಿದ್ದು, ಈಗ ಕುಮಾರಸ್ವಾಮಿ ಸಿಎಂ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಂದ್ಹಾಗೆ ಸಿ.ಎಂ.ಇಬ್ರಾಹಿಂ ಮೂಲತಃ ಭದ್ರಾವತಿಯವರು. ೨೦೧೩ರಲ್ಲಿ ಇವರು ಭದ್ರಾವತಿ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದರು. ದೇವೆಗೌಡರು ಪ್ರಧಾನ ಮಂತ್ರಿಯಾಗಿದ್ದಾಗ, ಕೇಂದ್ರ ಸಂಪುಟದಲ್ಲಿ ವಿಮಾನಯಾನ ಖಾತೆ ಸಚಿವರಾಗಿದ್ದರು.