ಪರ್ತಕರ್ತರ ಆರೋಗ್ಯ ತಪಾಸಣಾ ಶಿಬಿರ 

ಶಿವಮೊಗ್ಗ : ಮೆಟ್ರೋ ಯುನೈಟೆಡ್ ಹೆಲ್ತ್‌ಕೇರ್ ಆಸ್ಪತ್ರೆ ಹಾಗೂ ಹೃದಯ್ ಸ್ಪೆಷಾಲಿಟಿ ಕ್ಲಿನಿಕ್ ಸಂಯುಕ್ತಾಶ್ರಯದಲ್ಲಿ ಪರ್ತಕರ್ತರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಶಿಬಿರಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಸಮಯಕ್ಕೆ ಸರಿಯಾಗಿ ಊಟ ತಿಂಡಿ, ನಿದ್ರೆ ಇವೆಲ್ಲಾ ಪತ್ರಕರ್ತರಿಗೆ ಮರೀಚಿಕೆಯಾಗಿದೆ. ಹೀಗಾಗಿ ಆರೋಗ್ಯ ತಪಾಸಣೆ ಅವಶ್ಯಕತೆ ಇದೆ. ಪತ್ರಕರ್ತರ ಆರೋಗ್ಯ ಚೆನ್ನಾಗಿದ್ದರೆ ಸುದ್ದಿ ಕೂಡವೂ ಆರೋಗ್ಯವಾಗಿರುತ್ತದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಈ.ಕಾಂತೇಶ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಶಿವಕುಮಾರ್, ಸೂಡ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.