ಆರ್‌ಎಸ್‌ಎಸ್‌ಅನ್ನು ಟೀಕಿಸದಿದ್ರೆ ಸಿದ್ದರಾಮಯ್ಯ-ಹೆಚ್‌ಡಿಕೆಗೆ ತಿಂದ ಅನ್ನ ಜೀರ್ಣವಾಗಲ್ಲ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆರ್‌ಎಸ್‌ಎಸ್‌ಅನ್ನು ಟೀಕಿಸದಿದ್ರೆ ತಿಂದ ಅನ್ನ ಜೀರ್ಣವಾಗೋದಿಲ್ಲ. ಕುಮಾರಸ್ವಾಮಿ ಮೆದುಳಿಗೆ ಕಪ್ಪು ಪೊರೆ ಅಂಟಿಕೊAಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕುಟುಕಿದರು.

ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಷ್ಟçಪತಿ, ಪ್ರಧಾನಿ, ರಾಜ್ಯಪಾಲರೆಲ್ಲಾ ಆರ್‌ಎಸ್‌ಎಸ್‌ನವರೇ. ಆರ್‌ಎಸ್‌ಎಸ್‌ನಿಂದ ಕೆಲಸ ಮಾಡಿದವರನ್ನು ಟೀಕಿಸುವುದು ಸರಿಯಲ್ಲ ಎಂದರು. ಇನ್ನು ಸಿಂಧಗಿಯಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಕಾರಣ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಕಾಂಗ್ರೆಸ್‌ಗೆ ಹಿಂದುಗಳು ಮತ ಹಾಕಲ್ಲ. ಮುಸ್ಲಿಂ ಕಾಂಗ್ರೆಸ್ ಪಕ್ಷವನ್ನು ನಂಬುತ್ತಿಲ್ಲ. ಈ ಕಾರಣದಿಂದ ಕಾಂಗೆಸ್‌ಗೆ ನಡುಕ ಶುರುವಾಗಿದೆ ಎಂದು ವಾಗ್ದಾಳಿ ನಡೆಸಿದ್ರು. ಹಾಗೇ ಬಿಎಸ್‌ವೈ ಆಪ್ತರ ಮನೆ ಮೇಲೆ ಐಟಿ ದಾಳಿಯಾದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಕಾಂಗ್ರೆಸ್ ಐಟಿ ದಾಳಿಯನ್ನು ಬಿಜೆಪಿ ಏಜೆಂಟ್ ದಾಳಿ ಎಂದು ಟೀಕಿಸುತ್ತಿತ್ತು. ಈಗ ಏನಂತಾರೆ ಎಂದು ಖಾರವಾಗಿ ಪ್ರಶ್ನಿಸಿದ್ರು.