ಶಿವಮೊಗ್ಗ : ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಕಾಲೇಜಿನಲ್ಲಿ ಸ್ನೇಹ ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಆಯೋಜನೆ ಮಾಡಲಾಗಿದ್ದ ಈ ಕಾರ್ಯಕ್ರಮವನ್ನು ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ನಾರಾಯಣ ರಾವ್.ಜಿ.ಎಸ್. ಉದ್ಘಾಟಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಹೆಚ್.ಎಸ್.ನಾಗಭೂಷಣ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಈ ವೇಳೆ ನಿವೃತ್ತ ಬೋಧಕ ಹಾಗೂ ಬೋದಕೇತರ ವರ್ಗಕ್ಕೆ ಗುರುವಂದನೆ ಸಲ್ಲಿಸಿದರು.