ಕಂದಾಯ ವಿಷಯಗಳ ನಿರ್ವಹಣೆಯಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ

ಶಿವಮೊಗ್ಗ: ಕಂದಾಯ ಇಲಾಖೆಯ ವಿವಿಧ ಕಡತಗಳ ಶೀಘ್ರ ವಿಲೇವಾರಿ ್ಯಾಂಕಿAಗ್ನಲ್ಲಿ ಆಗಸ್ಟ್ ತಿಂಗಳಿನಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದೆ. ಭೂ ಪರಿವರ್ತನೆ ಅರ್ಜಿಗಳ ವಿಲೇವಾರಿ, ಉಪ ವಿಭಾಗದ ಆಯುಕ್ತರ ನ್ಯಾಯಾಲಯದ ಪ್ರಕರಣಗಳ ವಿಲೇವಾರಿ, ಜಿಲ್ಲಾಧಿಕಾರಿ ನ್ಯಾಯಾಲಯದ ಪ್ರಕರಣಗಳ ವಿಲೇವಾರಿ, ಪಹಣಿ ತಿದ್ದುಪಡಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕಡತಗಳ ವಿಲೇವಾರಿಯನ್ನು ಪರಿಗಣಿಸಿ ಪ್ರತಿ ತಿಂಗಳು ರಾಜ್ಯಮಟ್ಟದಲ್ಲಿ ್ಯಾಂಕಿAಗ್ ನೀಡಲಾಗುತ್ತದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸುವ ಎಲ್ಲಾ ಅರ್ಜಿಗಳನ್ನು ಕಾಲಮಿತಿಯ ಒಳಗಾಗಿ ವಿಲೇವಾರಿ ಮಾಡಲು ಎಲ್ಲಾ ಶಾಖಾ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದ್ದು, ಎಲ್ಲರ ಸಹಕಾರದಿಂದ ತ್ವರಿತವಾಗಿ ಕಡತಗಳ ವಿಲೇವಾರಿ ಸಾಧ್ಯವಾಗಿದೆ. ಕಚೇರಿಗೆ ಆಗಮಿಸುವ ಸಾರ್ವಜನಿಕರನ್ನು ಅಲೆದಾಡಿಸದೆ ಆದಷ್ಟು ಬೇಗನೆ ಕೆಲಸ ಕಾರ್ಯವನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.