16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ 

ಶಿವಮೊಗ್ಗ : 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅತ್ಯಂತ ಸಡಗರ ಸಂಭ್ರಮದಿಂದ ಚಾಲನೆ ನೀಡಲಾಗಿದೆ. ಸಮ್ಮೇಳನಾಧ್ಯಕ್ಷ ಡಾ. ಕೆಳದಿ ಗುಂಡಾ ಜೋಯ್ಸ್ ಅವರ ಮೆರವಣಿಗೆ ಗೋಪಾಳ ಬಡಾವಣೆಯಿಂದ ಸಾಹಿತ್ಯ ಗ್ರಾಮದವರೆಗೆ ನಡೆಯಿತು. ಮೆರವಣಿಗೆಯಲ್ಲಿ ಸ್ಥಳೀಯ ಜನಪದ ಕಲಾತಂಡಗಳು ಭಾಗವಹಿಸಿ ಮೆರಗು ನೀಡಿದವು.

ಸಮ್ಮೇಳನಾಧ್ಯಕ್ಷರು ಗೋಪಾಳದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಪುಸ್ತಕ ವಿತರಿಸಿದರು. ಧ್ವಜಾರೋಹಣ ಕಾರ್ಯಕ್ರಮ ಸಾಹಿತ್ಯ ಗ್ರಾಮದಲ್ಲಿ ನಡೆಯಿತು. ಸಮ್ಮೇಳನವನ್ನು ಸಾಹಿತಿ ಕೃಷ್ಣೇಗೌಡ ಉದ್ಘಾಟಿಸಿದರು. ಕಾರ್ಯಕ್ರಮ ನಡೆಯುವ ವೇದಿಕೆಗೆ ಲಂಕೇಶ್ ಅವರ ಹೆಸರು ಇಡಲಾಗಿದೆ. ಸಮ್ಮೇಳನದಲ್ಲಿ ನೂರಾರು ಸಾಹಿತ್ಯಾಸಕ್ತರು ಭಾಗಿಯಾಗಿದ್ದರು.