ಆರೋಪಿಗಳನ್ನ ಫ್ರೀ ಬಿಟ್ಟಿತ್ತ ಪೊಲೀಸ್ ಇಲಾಖೆ? 

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹತ್ಯೆ ಪ್ರಕರಣ ಬೆನ್ನೆಲ್ಲೆ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸಮಾಜ ಘಾತುಕ ಚಟುವಟಿಕೆ ಹಾಗೂ ಅಂತಹ ದುಷ್ಕೃತ್ಯಗಳ್ಲಿ ಭಾಗಿಯಾಗುತ್ತಿರುವವರ ಕುರಿತಾಗಿಯೂ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಗೃಹಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಹರ್ಷ ಕೊಲೆ ಆರೋಪದಲ್ಲಿ ಬಂಧಿತರಾಗಿರುವ ಅನೇಕರ ವಿರುದ್ಧ ದೊಡ್ಡಪೇಟೆ ಹಾಗೂ ಕೋಟೆ ಪೊಲೀಸ್ ಠಾಣೆಯಲ್ಲಿ ತೀವ್ರ ತರಹದ ಪ್ರಕರಣಗಳು ದಾಖಲಾಗಿದ್ದವು ಎಂಬ ಮಾಹಿತಿ ಇದೆ. ಕ್ರಿಮಿನಲ್ ಹಿನ್ನೆಲೆಯಿರುವ ಈ ಆರೋಪಿಗಳ ಮೇಲೆ ಎರಡು ಪೊಲೀಸ್ ಠಾಣೆಯಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳು, ಸಿಬ್ಬಂದಿ ತೆಗೆದುಕೊಂಡಿರುವ ಕ್ರಮಗಳೇನು? ಹಾಗೂ ಕರ್ತವ್ಯ ನಿರ್ವಹಣೆಯಲ್ಲಾದ ಲೋಪಗಳ ಕುರಿತಾಗಿ ಮತ್ತು ಮೇಲಾಧಿಕಾರಿಗಳು ನೀಡಿರುವ ನಿರ್ದೇಶನಗಳು ಸರಿಯಾಗಿ ಪಾಲನೆಯಾಗಿದೆಯೇ ಎಂಬುದರ ಕುರಿತಾಗಿಯೂ ತನಿಖೆ ನಡೆಸಿ ಒಂದು ವಾರದಲ್ಲಿ ವಿಸ್ತೃತ ವರದಿ ನೀಡುವಂತೆ ಗೃಹಸಚಿವ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.