ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದು, ಮೂರು ಇ ಗಳೊಂದಿಗೆ ರಾಜ್ಯದ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಹೇಳಿದ್ದಾರೆ. ಶಿಕ್ಷಣ, ಉದ್ಯೋಗ, ಸಬಲೀಕರಣಕ್ಕೆ ಒತ್ತು ಕೊಡಲಾಗುವುದು. ರಾಜ್ಯದ ಅಭಿವೃದ್ಧಿಗೆ ಕಾರ್ಯತಂತ್ರ ರೂಪಿಸಲಾಗಿದೆ. ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯೊಂದಿಗೆ ಮುನ್ನಡೆಯುತ್ತಿದ್ದೇವೆ.
ಕೋವಿಡ್ ನಡುವೆಯೂ ರಾಜ್ಯ ಪ್ರಗತಿಯತ್ತ ಮುನ್ನಡೆಯುತ್ತಿದೆ. ವಿವಿಧ ಇಲಾಖೆಗಳ ಸಹಕಾರದಿಂದ ಕೋವಿಡ್ ನಿಯಂತ್ರಣ ಸಾಧ್ಯವಾಗಿದೆ. ಕೃಷಿ, ಕೈಗಾರಿಕೆಯಲ್ಲಿ ಹೆಚ್ಚಿನ ಪಾಲುದಾರಿಕೆ ತರಲಾಗುತ್ತಿದೆ. ನವ ಭಾರತಕ್ಕಾಗಿ ನವಕರ್ನಾಟಕವನ್ನು ರೂಪಿಸಲಾಗುತ್ತಿದೆ. ಇದೇ ವೇಳೆ ಕಾಶಿಯಾತ್ರೆ ಹೋಗುವವರಿಗೆ ಸಹಾಯಧನವನ್ನು ಘೋಷಿಸಲಾಗಿದೆ. ಹಾಗೇ ಯಶಸ್ವಿನಿ ಯೋಜನೆಗೆ 300 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಆಗುತ್ತಿದ್ದರೂ ರಾಜ್ಯದಲ್ಲಿ ತೈಲ ತೆರಿಗೆ ಏರಿಸದೆ ಜನಸಾಮಾನ್ಯರಿಗೆ ಹೊರೆ ತಪ್ಪಿಸಿದ್ದಾರೆ. ಇಷ್ಟೇ ಅಲ್ಲದೆ ಮತ್ತಿನ್ಯಾವ ತೆರಿಗೆಯನ್ನೂ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಳ ಮಾಡಲಾಗಿಲ್ಲ. ಹಾಗೇ ಅಂಗನವಾಡಿ ಹಾಗೂ ಬಿಸಿಯೂಟ ನೌಕರರ ಗೌರವಧನವನ್ನೂ ಹೆಚ್ಚಳ ಮಾಡಲಾಗಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಜಿಲ್ಲಾ ಹಾಲು ಒಕ್ಕೂಟಗಳನ್ನು ರಚಿಸಲು ಉದ್ದೇಶಿಸಲಾಗಿದೆ