ಬೆಂಗಳೂರು : ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ.ವೈ. ವಿಜಯೇಂದ್ರ ಅವರ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣಿರೆರಚಿದೆ. ಕೊನೆ ಕ್ಷಣದಲ್ಲಿ ವಿಜಯೇಂದ್ರ ಅವರನ್ನ ಹೈಕಮಾಂಡ್ ಕಡೆಗಣಿಸಿದೆ.
ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು, ಕೊನೇ ಕ್ಷಣದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನ ಅಧಿಕೃತವಾಗಿ ಘೋಷಣೆ ಮಾಡಿದೆ. ಹೌದು, ಬಿಜೆಪಿ ಕೊನೇ ಕ್ಷಣದಲ್ಲಿ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಊಹಿಸದ ಹೆಸರು ಪಟ್ಟಿಯಲ್ಲಿರುವುದು ಬಿಜೆಪಿ ನಾಯಕರ ಅಚ್ಚರಿಗೆ ಕಾರಣವಾಗಿದೆ.
ಅಚ್ಚರಿ ಅಂದ್ರೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಮೂಲತಃ ಕೊಪ್ಪಳ ಜಿಲ್ಲೆಯವರಾದ ಹೇಮಲತಾ ನಾಯಕ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ ಲಕ್ಷ್ಮಣ ಸವದಿ, ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಕೇಶವ ಪ್ರಸಾದ್ ಹಾಗೂ ಚಲುವಾದಿ ನಾರಾಯಣಸ್ವಾಮಿ ಅವರಿಗೆ ಮಣೆ ಹಾಕಲಾಗಿದೆ. ಪಶ್ಚಿಮ ಕ್ಷೇತ್ರದ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಬಸವರಾಜ ಹೊರಟ್ಟಿಗೆ ಟಿಕೆಟ್ ಫೈನಲ್ ಮಾಡಲಾಗಿದೆ.
ಇತ್ತ ಕಾಂಗ್ರೆಸ್ ಪಕ್ಷ ಕೂಡ ಇಬ್ಬರಿಗೆ ಟಿಕೆಟ್ ಘೋಷಣೆ ಮಾಡಿದ್ದು ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ್ ಯಾದವ್ ಅವರನ್ನ ಕಣಕ್ಕಿಳಿಸಿದೆ. ಜೆಡಿಎಸ್ ಶರವಣ ಅವರಿಗೆ ಟಿಕೆಟ್ ನೀಡಿದೆ.