ಶಿವಮೊಗ್ಗ : ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ನಡೆದ ಹಿಜಾಬ್-ಕೇಸರಿ ವಿವಾದದಿಂದ ಸಂಘರ್ಷದ ವಾತಾವರಣ ಉಂಟಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಶಾಂತಿ ಕಾಪಾಡುವಂತೆ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಅವರಿಗೆ ಮನವಿ ಮಾಡಿದ್ದಾರೆ.
ನಂತರ ಮಾತನಾಡಿದ ಶಾಸಕರು, ಶಿವಮೊಗ್ಗ ನಗರದಲ್ಲಿ ಇದು ಮೊದಲ ಕಹಿ ಅನುಭವ. ಓದುವ ವಿದ್ಯಾರ್ಥಿಗಳ ಕೈಯಲ್ಲಿ ಕಲ್ಲನ್ನ ನೋಡಿದ್ದು ನಿಜಕ್ಕೂ ಖಂಡನೀಯ. ಹೀಗಾಗಿ ಜಿಲ್ಲೆಯಲ್ಲಿ ಶಾಂತಿ ಕಾಪಾಡುವಂತೆ ಎಸ್‌ಪಿ ಅವರಲ್ಲಿ ಮನವಿ ಮಾಡಲಾಗಿದೆ ಎಂದರು.