ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಜಿಲ್ಲಾ ಯೋಜನಾ ಸಮಿತಿ ಕಾರ್ಯಗಾರವನ್ನು ಜಿಲ್ಲಾ ಪಂಚಾಯತ್‌ನಲ್ಲಿ ಉದ್ಘಾಟಿಸಿದರು. ಬಳಿಕ ಜಿಲ್ಲೆಯ ಜನ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು
. ಸಭೆಯಲ್ಲಿ ಮಳೆಯಿಂದಾಗಿ ಜಿಲ್ಲೆಯಲ್ಲಾಗಿರುವ ಹಾನಿ ಅವುಗಳಿಗೆ ತೆಗೆದುಕೊಳ್ಳಬೇಕಾದ ಪರಿಹಾರ ಹಾಗೂ ಮುಂಜಾಗೃತ ಕ್ರಮಗಳ ಕುರಿತು ಚರ್ಚಿಸಿ ಮಾಹಿತಿ ಪಡೆದುಕೊಂಡರು. ಹಾಗೇಯೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಿದರು.
ಸಭೆಯಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕ್ ನಾಯ್ಕ್, ಕುಮಾರ್ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪಂಚಾಯತ್ ಸಿಇಓ ವೈಶಾಲಿ ಹಾಗೂ ವಿವಿಧ ಇಲಾಖೆಗಳ ಪ್ರಮುಖರು ಹಾಜರಿದ್ದರು.