ಸುಡು ಬಿಸಿಲಿನಲ್ಲಿ ಮಳೆಹಾನಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ

ಶಿವಮೊಗ್ಗ :  ಮಳೆ ನಿಂತು ಸುಡು ಬಿಸಿಲು ಆರಂಭವಾದ ಮೇಲೆ ಜಿಲ್ಲಾ ಉಸ್ತುವರಿ ಸಚಿವರು ಕಡೆಗೂ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಬೆಳಗ್ಗೆಯಿಂದಲೇ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಕೆ.ಸಿ ನಾರಾಯಣ ಗೌಡ ಹಿರಿಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.

ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ, ಶಾಸಕ ಕೆ.ಬಿ.ಅಶೋಕ್ ನಾಯಕ್, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮತ್ತಿತರ ಮುಖಂಡರು ಹಾಗೂ ಅಧಿಕಾರಿಗಳು ಜೊತೆಯಲ್ಲಿದ್ದರು.