ಶಿವಮೊಗ್ಗ : ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರುವ ಪ್ರಧಾನ ಮಂತ್ರಿಯಗಳ ಆಪರೇಷನ್ ಗಂಗಾ ಯೋಜನೆ ಯಶಸ್ವಿಯಾಗಿದೆ. ವಿಶ್ವದ ದೊಡ್ಡ ರಾಷ್ಟ್ರಗಳು ಎಂದು ಹೇಳಿಕೊಳ್ಳುವ ನಾಯಕರುಗಳಿಂದಲೇ ತಮ್ಮ ನಾಗರಿಕರನ್ನು ಇನ್ನೂ ವಾಪಾಸ್ ಕರೆದುಕೊಂಡು ಹೋಗುವುದು ಸಾಧ್ಯವಾಗಿಲ್ಲ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಈ.ಕಾಂತೇಶ್ ಹೇಳಿದರು.
ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಉಕ್ರೇನ್ ಹಾಗೂ ರಷ್ಯಾ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪ್ರದೇಶದಲ್ಲಿ ಸಿಲುಕಿದ್ದ ಭಾರತದ ಸುಮಾರು ೨೦ ಸಾವಿರಷ್ಟು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಹಾಗೂ ಆಡಳಿತಾತ್ಮಕ ಸಾಮರ್ಥ್ಯದಿಂದ ಈ ಕಾರ್ಯ ಸಾಧ್ಯವಾಗಿದೆ. ಉಕ್ರೇನ್‌ನಿಂದ ಹಿಂತಿರುಗಿರುವವರಲ್ಲಿ ನಮ್ಮ ಜಿಲ್ಲೆಯ ಅನುಮಿಷ ಹಾಗೂ ಜಯಶೀಲರ ಜೊತೆ ನಾವು ಈಗಾಗಲೇ ಮಾತುಕತೆ ನಡೆಸಿದ್ದೇವೆ. ಇವರ ಮುಂದಿನ ಭವಿಷ್ಯಕ್ಕೆ ನಾವೆಲ್ಲಾ ಬೆಂಬಲ ನೀಡುತ್ತೇವೆ ಎಂದರು ಹಾಗೂ ಶಿವಮೊಗ್ಗದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವಲ್ಲಿ ಸಫಲರಾದ ಪ್ರಧಾನಿ ಮೋದಿಯವರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ರಾಷ್ಟ್ರ ಭಕ್ತರ ಬಳಗದ ವತಿಯಿಂದ ಪಿಎಂ ಕೇರ್ಸ್ ಫಂಡ್‌ಗೆ ದೇಣಿಗೆ ನೀಡುತ್ತಿದ್ದೇವೆ ಎಂದರು.