ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಸಂಯುಕ್ತಾಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸಲಾಗಿದೆ. ಕುವೆಂಪು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟನೆಯನ್ನು ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ನೆರವೇರಿಸಿದರು.
ವೇದಿಕೆ ಮೇಲಿದ್ದ ಗಣ್ಯರೆಲ್ಲರು ಕೆಂಪೆಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸೂಚಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಎಸ್ಪಿ ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ, ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲೆ ಡಾ.ವೀಣಾ, ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯೆ ರೇಖಾ ರಂಗನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು