ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿರುವ ರೋಹಿತ್ ಶರ್ಮಾ ತಂಡಕ್ಕೆ ವಾಪಸಾಗಲಿದ್ದು, ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಜಯದ ಲಯಕ್ಕೆ ಮರಳಲು ಕಾತರಿಸುತ್ತಿದೆ. ಇಂದು ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಸೆಣಸಲಿದ್ದು, ಪ್ಲೆಆಫ್ ದೃಷ್ಟಿಯಿಂದ ಎರಡೂ ತಂಡಗಳಿಗೆ ಇದು ಮಹತ್ವದ ಪಂದ್ಯವೆನಿಸಿದೆ.
ಚೆನ್ನೆöÊ ವಿರುದ್ಧದ ಪಂದ್ಯದಲ್ಲಿ ರೋಹಿತ್ ಆಡಿರಲಿಲ್ಲ. ಆ ಪಂದ್ಯದಲ್ಲಿ ಮುಂಬೈ ೨೦ ರನ್‌ಗಳ ಸೋಲು ಅನುಭವಿಸಿತ್ತು. ಅಂಕಪಟ್ಟಿಯಲ್ಲಿ ೪ನೇ ಸ್ಥಾನದಲ್ಲಿರುವ ಮುಂಬೈ, ಪ್ಲೆಆಫ್ ರೇಸ್‌ನಲ್ಲಿ ಹಿಂದೆ ಬೀಳದಿರಲು ಈ ಪಂದ್ಯದಲ್ಲಿ ಗೆಲ್ಲಬೇಕಿದೆ. ಮತ್ತೊಂದೆಡೆ ಆರ್‌ಸಿಬಿ ವಿರುದ್ಧ ಸಾಧಿಸಿದ ಗೆಲುವು, ಕೆಕೆಆರ್ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ತಂಡ ಮತ್ತಷ್ಟು ಆಕ್ರಮಣಕಾರಿ ಆಟವಾಡಲು ಸಿದ್ಧವಿದೆ ಎಂದು ನಾಯಕ ಇಯಾನ್ ಮಾರ್ಗನ್ ಹೇಳಿಕೊಂಡಿದ್ದಾರೆ.
ಕೆಕೆಆರ್ ಈ ಪಂದ್ಯದಲ್ಲಿ ಗೆದ್ದರೆ ಅಂಕಪಟ್ಟಿಯಲ್ಲಿ ೪ನೇ ಸ್ಥಾನಕ್ಕೇರಲಿದ್ದು, ಪ್ಲೆಆಫ್‌ನಲ್ಲಿ ಸ್ಥಾನಕ್ಕಾಗಿ ನಡೆಯುತ್ತಿರುವ ಪೈಪೋಟಿ ಮತ್ತಷ್ಟು ತೀವ್ರಗೊಳ್ಳಲಿದೆ. ರೋಹಿತ್ ಶರ್ಮಾ ಆಡುವ ಹನ್ನೊಂದರ ಬಳಗ ಕೂಡಿಕೊಂಡರೆ ಬಹುತೇಕ ಇಶಾನ್ ಕಿಶಾನ್‌ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.