ಶಿವಮೊಗ್ಗ : ಕೋಟೆ ಮಾರಿಕಾಂಬ ಜಾತ್ರೆ ಮಾರ್ಚ್ 22ರಂದು ಆರಂಭವಾಗಲಿದ್ದು ಈಗಾಗಲೇ ಹಲವು ಧಾರ್ಮಿಕ ಆಚರಣೆಗಳು ನಡೆಯುತ್ತಿವೆ. ಈ ನಡುವೆ ಕೋಟೆ ಮಾರಿಕಾಂಬ ಸೇವಾ ಸಮಿತಿ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಜಾತ್ರೆಯ ಪೂರ್ವಭಾವಿ ಸಭೆ ನಡೆಸಿದ್ದಾರೆ.
ಕೋಟೆ ಮಾರಿಕಾಂಬ ದೇವಾಲಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಾತ್ರೆಯ ರೂಪುರೇಶೆಗಳ ಕುರಿತು ಚರ್ಚಿಸಿದ್ದಾರೆ. ಈ ವೇಳೆ ಪಾಲಕೆ ವತಿಯಿಂದ ಜಾತ್ರೆಗೆ 10 ಲಕ್ಷದ ಚೆಕ್ ವಿತರಣೆ ಮಾಡಿದ್ದಾರೆ. ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಚೆಕ್‌ಅನ್ನು ಮಾರಿಕಾಂಬ ಸೇವಾ ಸಮಿತಿಗೆ ಹಸ್ತಾಂತರಿಸಿದರು.
ಸಭೆಯಲ್ಲಿ ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷ ಮರಿಯಪ್ಪ, ಕಾರ್ಯದರ್ಶಿ ಎನ್.ಮಂಜುನಾಥ್, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ವಿಪಕ್ಷ ನಾಯಕಿ ಯಮುನಾ ರಂಗೇಗೌಡ ಸೇರಿದಂತೆ ಮತ್ತಿತರ ಪಾಲಿಕೆ ಸದಸ್ಯರು ಹಾಗೂ ಜಾತ್ರಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.