ಶಿವಮೊಗ್ಗ : ಪ್ರಿಯದರ್ಶಿನಿ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಪ್ರಿಯದರ್ಶಿನಿ ಸಮುದಾಯ ಭವನ ಲೋಕಾರ್ಪಣೆಗೊಂಡಿದೆ. ಸಚಿವ ಕೆ.ಎಸ್.ಈಶ್ವರಪ್ಪ ಈ ಸಮುದಾಯ ಭವನದ ಉದ್ಘಾಟನೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಪ್ರಿಯದರ್ಶಿನಿ ಬಡಾವಣೆಗೆ ಬರಲು ನನಗೆ ಹೊಟ್ಟೆಕಿಚ್ಚಾಗುತ್ತದೆ. ಯಾಕಂದ್ರೆ ಇಷ್ಟು ಜನ ಒಟ್ಟಾಗಿ ಇರುವಂತಹ ಬಡಾವಣೆ ಶಿವಮೊಗ್ಗ ನಗರದಲ್ಲಿ ಯಾವುದೂ ಇಲ್ಲ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಪ್ರಿಯದರ್ಶಿನಿ ಬಡಾವಣೆ ನಿವಾಸಿಗಳ ಕ್ಷೆಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಎಸ್.ಗುರುರಾಜ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.