ಕೋರ್ಟ್ ಆದೇಶವನ್ನು ಮೀರಿ ವರ್ತಿಸುತ್ತಿದ್ದಾರೆ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಎಲ್ಲ ಧರ್ಮದವರು ದೇಶದ ಕಾನೂನಿಗೆ ಮತ್ತು ಸಂವಿಧಾನಕ್ಕೆ ತಲೆ ಬಾಗಬೇಕು. ಕಾಂಗ್ರೆಸ್ ಪಕ್ಷ ಓಟಿನ ರಾಜಕಾರಣಕ್ಕಾಗಿ ಕೋರ್ಟ್ ಆದೇಶವನ್ನ ಮೀರಿ ವರ್ತಿಸುತ್ತಿದೆ. ಇದು ಮುಂದುವರೆದರೆ ಮುಂದಿನ ಚುನಾವಣೆಯಲ್ಲಿ ವಿರೋಧ ಪಕ್ಷದಲ್ಲಿ ಕೂರಲೂ ಸಹ ಸಂಖ್ಯೆ ಇರುವುದಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದರು.

ಇನ್ನು ಬೆಲೆ ಏರಿಕೆ ವಿಷಯವನ್ನು ಮರೆಮಾಚುವ ಸಲುವಾಗಿ ಬಿಜೆಪಿ ಧರ್ಮದ ವಿಚಾರವನ್ನ ಪ್ರಸ್ತಾಪಿಸುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರದ ವೈಫಲ್ಯ, ವೈಫಲ್ಯ ಎಂದು ಕಾಂಗ್ರೆಸ್‌ನವರು ಹೇಳುತ್ತಲೇ ಇದ್ದಾರೆ. ಕಾಂಗ್ರೆಸ್‌ನವರು ಹೀಗೆ ಹೇಳಿದ ಎಲ್ಲಾ ಚುನಾವಣೆಗಳಲ್ಲೂ ನಾವೇ ಗೆಲ್ಲುತ್ತಿದ್ದೇವೆ. ಸರ್ಕಾರದ ವೈಫಲ್ಯವನ್ನು ಕಾಂಗ್ರೆಸ್, ಜೆಡಿಎಸ್‌ನವರು ತೀರ್ಮಾನಿಸುವುದಲ್ಲ. ಜನರು ತೀರ್ಮಾನಿಸಬೇಕು. ಸರ್ಕಾರ ಒಳ್ಳೆಯ ಕೆಲಸ ಮಾಡ್ತಿದೆ ಎನ್ನುವ ಕಾರಣಕ್ಕೆ, ಗ್ರಾಮ ಪಂಚಾಯ್ತಿಯಿಂದ ಹಿಡಿದು ಲೋಕಸಭೆಯವರೆಗೂ ಎಲ್ಲಾ ಚುನಾವಣೆಗಳಲ್ಲಿ ಗೆದ್ದುಕೊಂಡು ಬರುತ್ತಿದ್ದೇವೆ. ಜನರ ತೀರ್ಪಿಗೆ ನಾವು ಬದ್ಧರಿದ್ದೇವೆ ಎಂದರು.