ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಸಂಘದ 15 ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಶೇಕಡ 98 ರಷ್ಟು ಮತಚಲಾವಣೆಯಾಗಿದೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಚುನಾವಣಾ ಕಣದಲ್ಲಿ 24 ಮಂದಿ ನೌಕರರು ಸ್ಪರ್ಧಿಸಿದ್ದಾರೆ. ಇವರಲ್ಲಿ ಆರು ಮಂದಿ ಮಹಿಳೆಯರು ಸೇರಿದ್ದಾರೆ. ಮತ ಎಣಿಕೆ ಪ್ರಾರಂಭವಾಗಿದ್ದು, ರಾತ್ರಿ 8.30 ರ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ. ಮುಂದಿನ ವಾರ, ಚುನಾಯಿತ ೧೫ ಮಂದಿ ನಿರ್ದೇಶಕರಲ್ಲಿಯೇ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಮತ್ತು ಖಜಾಂಚಿಯ ಸ್ಥಾನಗಳಿಗೆ ಆಯ್ಕೆ ನಡೆಯಲಿದೆ.
ಕುವೆಂಪು ವಿವಿ ಅಧ್ಯಾಪಕೇತರ ನೌಕರರ ಸಂಘದ ನಿರ್ದೇಶಕರ ಚುನಾವಣೆ
