ಬೆಂಗಳೂರು : ಕುವೆಂಪು ಪ್ರತಿಷ್ಟಾನದ ಅಧ್ಯಕ್ಷ ನಾಡೋಜ ಡಾ.ಹಂಪ ನಾಗರಾಜಯ್ಯ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಕುವೆಂಪು ಅವರಿಗೆ ಹಾಗೂ ನಮ್ಮ ನಾಡ ಗೀತೆಗೆ ಅವಮಾನ ಮಾಡಿದ್ದಾರೆ. ಅಂತಹ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಸರ್ಕಾರ ಜವಬ್ದಾರಿಯುತ ಸ್ಥಾನ ನೀಡಿದೆ.
ಇದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಇದರಿಂದ ಕುವೆಂಪು ಅವರನ್ನು ನಿಂದಿಸುವವರಿಗೆ ಸರ್ಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದಾವಕಾಶಗಳಿವೆ ಎಂಬ ತಪ್ಪು ಸಂದೇಶ ರವಾನೆ ಮಾಡಿದಂತಾಗಿದೆ. ಹೀಗಾಗಿ ಕುವೆಂಪು ಪ್ರತಿಷ್ಟಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಮುಖ್ಯಮಂತ್ರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಬರೆದುಕೊಂಡಿದ್ದಾರೆ