ಪರೀಕ್ಷಾ ಶುಲ್ಕ ಕಡಿತಗೊಳಿಸುವಂತೆ ಆಗ್ರಹ 

ಶಂಕರಘಟ್ಟ : ಪರೀಕ್ಷಾ ಶುಲ್ಕವನ್ನು ಕಡಿತಗೊಳಿಸುವಂತೆ ಆಗ್ರಹಿಸಿ ಕುವೆಂಪು ವಿವಿ ಅಂತಿಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿವಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, 2021ರಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಾಗಿದ್ದ ನಾವು ದ್ವಿತೀಯ ಸೆಮಿಸ್ಟರ್ ಪರೀಕ್ಷೆಯ ಪೂರ್ಣ ಶುಲ್ಕವನ್ನು ಕಟ್ಟಿದ್ದೆವು. ಆದ್ರೆ ಕೋವಿಡ್ ಕಾರಣದಿಂದಾಗಿ ಪರೀಕ್ಷೆ ನಡೆಸಿರಲಿಲ್ಲ. ಈಗ ಮೂರನೇ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಸುವಂತೆ ಪ್ರಕಟಣೆ ಹೊರಡಿಸಲಾಗಿದೆ. ಆದರೆ ಈ ಬಾರಿ ಅಂಕ ಪಟ್ಟಿ ಶುಲ್ಕವನ್ನು ಹೊರತುಪಡಿಸಿ ಉಳಿದ ಶುಲ್ಕವನ್ನು ಕಡಿತಗೊಳಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಈ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಕ್ರಿಯೆ ನೀಡಿದ ವಿವಿ ಕುಲಪತಿ ಪ್ರೋ.ಬಿ.ಪಿ.ವೀರಭದ್ರಪ್ಪ, ಕಳೆದ ಮೂರು ವರ್ಷಗಳಿಂದ ನಾವು ಯಾವ ಶುಲ್ಕವನ್ನು ಏರಿಕೆ ಮಾಡಿಲ್ಲ. ಆದರೆ ಕೋವಿಡ್ ಕಾರಣದಿಂದಾಗಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ಸರದೂಗಿಸಲು ಅನಿವಾರ್‍ಯ ಕಾರಣದಿಂದ ಶುಲ್ಕ ಹೆಚ್ಚಳ ಮಾಡಲಾಗಿದೆ. ಇದನ್ನು ಅರ್ಥ ಮಾಡಿಕೊಳ್ಳಿ ಎಂದರು.