ಸಂಗೀತ ಇರುವವರೆಗೂ ಲತಾ ಮಂಗೇಶ್ಕರ್ ಚಿರಸ್ಥಾಯಿ : ಸಿಎಂ 

ಬೆಂಗಳೂರು : ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಸಾವಿಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಈ ಜಗತ್ತಿನಲ್ಲಿ ಎಲ್ಲಿಯತನಕ ಸಂಗೀತ ಇರುತ್ತದೆಯೋ, ಎಲ್ಲಿಯವರೆಗೂ ಹಾಡುಗಾರಿಕೆ ಇರುತ್ತದೆಯೋ, ಅಲ್ಲಿಯವರೆಗೂ ಲತಾ ಮಂಗೇಶ್ಕರ್ ಅವರು ಪ್ರತಿಯೊಬ್ಬರ ಮನದಲ್ಲಿಯೂ ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಟೀಟ್ ಮಾಡುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.