ಪ್ರೆಸ್ ಟ್ರಸ್ಟನಲ್ಲಿ ನಡೆದ ಲೋಗೋ ಬಿಡುಗಡೆ ಕಾರ್ಯಕ್ರಮ

ಶಿವಮೊಗ್ಗ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಲೋಗೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಪಿ ಲಕ್ಷ್ಮೀಪ್ರಸಾದ್ ಸಂಘದ ಲೋಗೋವನ್ನು ಅನಾವರಣಗೊಳಿಸಿದ್ರು.

ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ಅಧ್ಯಕ್ಷ ಗೋಪಿನಾಥ್, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹಾಗೂ ಶಿವಮೊಗ್ಗ ವಾರ್ತಾ ಇಲಾಖೆಯ ಹಿರಿಯ ವಾರ್ತಾಧಿಕಾರಿ ಶಫಿ ಸಾಧುದ್ದೀನ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ರು. ಶಿವಮೊಗ್ಗ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಎಸ್ ಯಡಗೆರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ರು. ಇನ್ನು ಸಂಘದ ಗೌರವಾಧ್ಯಕ್ಷ ಎಸ್.ಚಂದ್ರಕಾಂತ್ ಅವರ ಗೌರವ ಉಪಸ್ಥಿತಿಯಿತ್ತು.