ಶಿವಮೊಗ್ಗ : ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿತಕ್ಕೆ ಒಳಗಾಗಿದ್ದ ಸೇಂದಿಲ್ ಎಂಬಾತನು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
2 ದಿನಗಳ ಹಿಂದೆ ಬಟ್ಟೆ ಮಾರುಕಟ್ಟೆಯಲ್ಲಿ ಸಂತೋಷ್ ಎಂಬಾತನು ಚಾಕುವಿನಿಂದ ಇರಿದಿದ್ದನು. ಹೃದಯ ಮತ್ತು ಹೊಟ್ಟೆಯ ಭಾಗಕ್ಕೆ ಗಾಯವಾದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೀಗ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.