ಶಿವಮೊಗ್ಗ : ದಕ್ಷಿಣ ಕನ್ನಡ - ಉಡುಪಿ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಮಂಜುನಾಥ್ ಭಂಡಾರಿಗೆ ಅಭಿನಂದನಾ ಸಮಾರಂಭ ಆಯೋಜನೆ ಮಾಡಲಾಗಿದೆ.
ಶನಿವಾರ ಕುವೆಂಪು ರಂಗಮಂದಿರದಲ್ಲಿ ನಡೆಯುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎಂ.ಬಿ.ಪಾಟೀಲ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಹಿಸಿಕೊಳ್ಳಲಿದ್ದಾರೆ. ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ವಿಧಾನ ಪರಿಷತ್ ಸದಸ್ಯ ಅಯನೂರು ಮಂಜುನಾಥ್ ಆಗಮಿಸಲಿದ್ದಾರೆ ಎಂದು ಮಂಜುನಾಥ್ ಬಂಡಾರಿ ಅಭಿನಂದನಾ ಸಮಿತಿಯಿಂದ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.