ಶಿವಮೊಗ್ಗ: ದೆಹಲಿಯಲ್ಲಿ ರೈತ ಚಳವಳಿ ಬುಧವಾರಕ್ಕೆ ೩೦೦ ದಿನ ಪೂರೈಸಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ರೈತರು ದಿಲ್ಲಿ ಚಲೋ ಜಾಥಾ ಹಮ್ಮಿಕೊಂಡಿದ್ದರು. ದಿಲ್ಲಿ ಗಡಿಗಳಲ್ಲಿ ರೈತರನ್ನು ತಡೆಹಿಡಿಯಲಾಯಿತು. ರಸ್ತೆಗಳಲ್ಲಿ ಸರ್ಕಾರ ಕಂದಕ ತೋಡಿತು. ಅಶ್ರುವಾಯು ಸಿಡಿಸಿತು. ವಾಟರ್ ಜೆಟ್‌ಗಳನ್ನು ಹಾರಿಸಿತು. ಆದರೂ ರೈತರು ಧೃತಿಗೆಡಲಿಲ್ಲ. ದಿಲ್ಲಿ ಗಡಿಗಳಲ್ಲೇ ಮೊಕ್ಕಾಂ ಹೂಡಿದರು.
ಅಂದಿನಿAದ ಇಂದಿನವರೆಗೆ ಶಾಂತಿಯುತ ಚಳವಳಿಯಲ್ಲಿ ತೊಡಗಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ಮೂರು ಕರಾಳ ಕೃಷಿ ಕಾಯಿದೆಗಳನ್ನು ಹಿಂಪಡೆಯಬೇಕು. ರೈತ ಬೆಳೆದ ಬೆಳೆಗೆ ಖಾತ್ರಿಯಾದ ಎಂಎಸ್‌ಪಿ ನೀಡಬೇಕು. ಅಲ್ಲಿಯವರೆಗೆ ಚಳವಳಿ ಮುಂದುವರೆಸಲು ರೈತರು ನಿರ್ಧರಿಸಿದ್ದಾರೆ. ದಿನೇ ದಿನೇ ಚಳವಳಿ ಗಟ್ಟಿಗೊಳ್ಳುತ್ತಿದೆ. ದೇಶಾದ್ಯಂತ ವ್ಯಾಪಿಸುತ್ತಿದೆ. ಇಷ್ಟೆಲ್ಲಾ ಆದರೂ ರೈತರ ಬೇಡಿಕೆಗಳೇನು ಎಂಬುದು ಸರ್ಕಾರಕ್ಕೆ ತಿಳಿದಿದ್ದರೂ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.
ಹಾಗಾಗಿ ರಾಜಕೀಯ ಪಕ್ಷಗಳು, ಕಾರ್ಮಿಕ ಸಂಘಟನೆಗಳು, ರೈತ ಸಂಘಗಳು, ಯುವಕರು, ಶಿಕ್ಷಕರು, ಕಾರ್ಮಿಕರು ಮತ್ತು ಇತರರು ಸೇರಿದಂತೆ ಸುಮಾರು ೧೦೦ ಸಂಸ್ಥೆಗಳು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೆಪ್ಟೆಂಬರ್ ೨೭ರ ಭಾರತ್ ಬಂದ್‌ಗೆ ಬೆಂಬಲ ಸೂಚಿಸಿವೆ.
ಇದಕ್ಕೆ ಶಿವಮೊಗ್ಗದಲ್ಲೂ ಸುಮಾರು ೨೫ರಿಂದ ೩೦ ಸಂಘಟನೆಗಳು ಬೆಂಬಲ ಸೂಚಿಸಿವೆ. ಬಿಜೆಪಿ ಹೊರತುಪಡಿಸಿ ಉಳಿದೆಲ್ಲಾ ಪಕ್ಷಗಳ ಮುಖಂಡರು ಬೆಂಬಲ ಸೂಚಿಸಿದ್ದಾರೆ. ರೈತ ಮುಖಂಡ ಬಸವರಾಜಪ್ಪ ಮಾತನಾಡಿ, ಚಳವಳಿಗೆ ಬೆಂಬಲ ನೀಡುವಂತೆ ಕೋರಿದ್ರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಕೆ.ಟಿ.ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.