ಮೇಕದಾಟು ೨.೦ಗೆ ಚಾಲನೆ 

ರಾಮನಗರ : ಮೇಕದಾಟು ಯೋಜನಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಎರಡನೇ ಹಂತದ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ. ರಾಮನಗರದ ಟಿ.ಆರ್.ಮಿಲ್ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಉಸ್ತುವಾರಿ ಸಚಿವ ರಣದೀಪ್ ಸಿಂಗ್ ಸುರ್ಜೇವಾಲ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಪಾದಯಾತ್ರೆಯ ನೇತೃತ್ವ ವಹಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಮುಖಂಡರಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಧೃವನಾರಾಯಣ, ಈಶ್ವರ್ ಖಂಡ್ರೆ ಹಾಗೂ ಮತ್ತಿತರ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಪಾದಯಾತ್ರೆಯು ಮಾರ್ಚ್ ೩ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತ್ಯವಾಗಿಲಿದೆ.