ಹೈಲೆಟ್ಸ್ :
ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ಪ್ರಕರಣ
ಶ್ರೀಗಳು ಸೆಪ್ಟೆಂಬರ್ ೧೪ರವರೆಗೆ ನ್ಯಾಯಾಂಗ ಬಂಧನಕ್ಕೆ
ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಜೆಎಂಎಫ್‌ಸಿ ಕೋರ್ಟ್
ಪ್ರಕರಣದ ಎರಡನೇ ಆರೋಪಿ ಹಾಸ್ಟೆಲ್ ವಾರ್ಡನ್
ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ
ಚಿತ್ರದುರ್ಗ : ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶ್ರೀಗಳನ್ನು ನ್ಯಾಯಾಲಯ ಸೆಪ್ಟೆಂಬರ್ ೧೪ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಮುರುಘಾ ಶ್ರೀಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಭಾನುವಾರ ಕಸ್ಟಡಿ ಅಂತ್ಯವಾಗಿತ್ತಿ. ಈ ಹಿನ್ನೆಲೆಯಲ್ಲಿ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಸೆ.೧೪ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಈ ಪ್ರಕರಣದ ಎರಡನೇ ಆರೋಪಿಯಾಗಿ ಶಿವಮೊಗ್ಗ ಕಾರಾಗೃಹದಲ್ಲಿರುವ ಮಠದ ಹಾಸ್ಟಲ್ ವಾರ್ಡನ್ ಅನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಕೇಳಲಾಗಿದೆ.