ಶಿವಮೊಗ್ಗ : ಅಜೇಯ ಸಂಸ್ಕೃತಿ ಬಳಗ ಹಾಗೂ ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ನಾರಾಯಣ ಸ್ಮರಣೆ ಎನ್ನುವ ಕಾರ್ಯಕ್ರಮ ಮೇ 22ರಂದು ಆಯೋಜಿಸಲಾಗಿದೆ. ವಿದ್ಯಾಂಸ ಹಾಗೂ ತತ್ವಶಾಸ್ತ್ರಜ್ಞರಾಗಿದ್ದ ಕೆ.ಎಸ್.ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ವಿದ್ವಾಂಸ ಅರಳುಮಲ್ಲಿಗೆ ಪಾರ್ಥಸಾರಥಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಆಗಮಿಸಲಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಕಾರ್ಯಕ್ರಮ ಆಯೋಜಕರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು.