ಶಿವಮೊಗ್ಗ : ನೇರಪಾವತಿ ಕಾರ್ಮಿಕರ ಖಾಯಮಾತಿಗೆ ಆಗ್ರಹಿಸಿ ಜುಲೈ ೧ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು. ಮೊದಲ ದಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮುಷ್ಕರ ಆರಂಭಿಸಿ, ಜುಲೈ ೨ರಿಂದ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರವನ್ನು ಮುಂದುವರೆಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ನೇರಪಾವತಿ ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಪೆಂಚಲಯ್ಯ.ವಿ ತಿಳಿಸಿದರು.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ನೇರಪಾವತಿ ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ರಾಜ್ಯಾದ್ಯಂತ ಏಕಕಾಲಕ್ಕೆ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ನಡೆಯಲಿರುವ ಮುಷ್ಕರಕ್ಕೆ ಸುಮಾರ ೬೦೦ ಮಂದಿ ಭಾಗಿಯಾಗುವ ಸಾಧ್ಯತೆಯಿದೆ ಎಂದರು.