ನಿರ್ಮಿತಿ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ನಾಗರಾಜ್ ಮೇಲೆ ಆರೋಪ

ಶಿವಮೊಗ್ಗ : ನಿರ್ಮಿತಿ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ನಾಗರಾಜ್ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿರುವುದಾಗಿ ಹರಮಘಟ್ಟಿ ಗ್ರಾಮದ ರಂಗಪ್ಪ ಎಂಬುವವರು ಆರೋಪಿಸಿದ್ದಾರೆ.

ಈ ಸಂಬಂಧ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಯನಗರ ಠಾಣೆಯ ವೃತ್ತ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿದ ರಂಗಪ್ಪ, ಶೆಟ್ಟಿಹಳ್ಳಿ ಗ್ರಾಮದಲ್ಲಿ ಹಿಡುವಳಿ ಜಮೀನಿನಲ್ಲಿ ಸ್ಮಶಾನ ಅಭಿವೃದ್ಧಿ ಕಾರ್ಯ ಮಾಡ್ತಾಯಿದ್ದಾರೆ. ಅಲ್ಲದೆ ಈ ಕಾಮಗಾರಿಯನ್ನು ಹಣವನ್ನು ಕೂಡ ಲೂಟಿ ಮಾಡ್ತಾಯಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿಗೆ ನಾಗರಾಜ್ ವಿರುದ್ಧ ದೂರು ನೀಡಿದ್ದೇವು. ಮಂಗಳವಾರ ಈ ವಿಚಾರವಾಗಿ ಜಿಲ್ಲಾಧಿಕಾರಿ ಚೇಂಬರ್ ಕಡೆಗೆ ಹೋಗುವಾಗ ಈ ಘಟನೆ ನಡೆದಿದೆ ಎಂದು ಆರೋಪಿಸಿದರು.