ಶಿವಮೊಗ್ಗ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಡಿಸೆಂಬರ್ 10ರಂದು ಮಹಾನಗರ ಪಾಲಿಕೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್‌ನ ಸ್ಥಳೀಯ ಸಂಸ್ಥೆಗಳ ೨೫ ಕ್ಷೇತ್ರಗಳಿಗೆ ಡಿಸೆಂಬರ್ ೧೦ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮತದಾನ ನಡೆಸುವುದರಿಂದ ಸಾರ್ವಜನಿಕರ ಪ್ರವೇಶವನ್ನ ನಿರ್ಬಂಧಿಸಲಾಗಿದೆ. ಆದ್ದರಿಂದ ಈ ದಿನ ಮಹಾನಗರ ಪಾಲಿಕೆಯಲ್ಲಿ ಯಾವುದೇ ಕಚೇರಿ ಕೆಲಸಗಳು ನಡೆಯುವುದಿಲ್ಲ. ಹೀಗಾಗಿ ಸಾರ್ವಜನಿಕರು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.