ಕೇಂದ್ರ ಸರ್ಕಾರವನ್ನು ವಜಾಗೊಳಿಸಿ 

ಶಿವಮೊಗ್ಗ : ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಆದ್ದರಿಂದ ಕೂಡಲೇ ಕೇಂದ್ರ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಸ್ಕೂಟರ್ ಶವಯಾತ್ರೆಯ ಅಣಕು ಪ್ರದರ್ಶನ ಮಾಡುವ ಮೂಲಕ ಮಹಾವೀರ ವೃತ್ತದಲ್ಲಿ ವಿಶೇಷವಾಗಿ ಪ್ರತಿಭಟನೆ ನಡೆಸಲಾಗಿದೆ.

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರಕ್ಕೆ ಆಗುತ್ತಿಲ್ಲ. ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆ ಕೂಡ ಏರಿಕೆಯಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಿದ್ದರು ಕೂಡ ಪೆಟ್ರೋಲ್, ಡಿಸೇಲ್ ಬೆಲೆಯನ್ನು ಮನಸ್ಸಿಗೆ ಬಂದಂತೆ ಹೆಚ್ಚಳ ಮಾಡಿದೆ. ಪಂಚರಾಜ್ಯ ಚುನಾವಣೆ ಕೇಂದ್ರ ಸರ್ಕಾರವು ತೈಲ ದರವನ್ನು ಕಡಿಮೆ ಮಾಡಿತ್ತು. ಇದೀಗ ರಷ್ಯಾ-ಉಕ್ರೇನ್ ಯುದ್ಧದ ನೆಪದಲ್ಲಿ ಮತ್ತೆ ಏರಿಕೆ ಮಾಡುತ್ತಿದ್ದೆ. ಆದ್ದರಿಂದ ಕೇಂದ್ರ ಸರ್ಕಾರವನ್ನು ವಜಾಗೊಳಿಸಬೇಕೆಂದು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಮಾಡಿದ್ದಾರೆ.