ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘ ಸ್ಥಾಪನೆ 

ಶಿವಮೊಗ್ಗ : ಒಕ್ಕಲಿಗ ಸಮಾಜದ ಮಹಿಳೆಯರನ್ನು ಒಂದೆಡೆ ಸೇರಿಸಿ ಅವರೊಳಗಿರುವ ಪ್ರತಿಭೆಗಳನ್ನು ಹೊರಹಾಕಲು ಹಾಗೂ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘ ಸ್ಥಾಪನೆಯಾಗಲಿದೆ. ಶುಕ್ರವಾರ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಡಾ.ಶ್ರೀ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಕಾರ್ಯಕ್ರಮನ್ನು ಉದ್ಘಾಟಿಸಲಿದ್ದಾರೆ. ಶ್ರೀ.ಪ್ರಸನ್ನನಾಥ ಮಹಾಸ್ವಾಮೀಜಿ ದೀವ್ಯ ಸಾನಿಧ್ಯವನ್ನು ವಹಿಸಿಕೊಳ್ಳಲಿದ್ದಾರೆ. ಹಾಗೇನೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ಗೌರವ ಅಧ್ಯಕ್ಷ ಡಾ.ಅಂಜನಪ್ಪ ವಹಿಸಿಕೊಳ್ಳಲಿದ್ದಾರೆ ಎಂದು ಮಾಧ್ಯಮಗೋಷ್ಠಿಯಲ್ಲಿ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದವರು ತಿಳಿಸಿದರು.