ಬೆಂಗಳೂರು : ದೇಶದ ಮೊದಲ ಓಮಿಕ್ರಾನ್ ಪ್ರಕರಣ ಬೆಂಗಳೂರಿನಲ್ಲಿ ಮೊದಲು ಪದಾರ್ಪಣೆ ಮಾಡಿತ್ತು. ಇದೀಗ ಕರ್ನಾಟಕದಲ್ಲಿ ಓಮಿಕ್ರಾನ್ ಸಂಖ್ಯೆ ೩ಕ್ಕೆ ಏರಿಕೆಯಾಗಿದೆ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
೩೪ ವರ್ಷದ ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸದ್ಯಕ್ಕೆ ಆತನನ್ನ ಐಸೋಲೆಟ್ ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈತನಿಂದ 5 ಪ್ರೈಮರಿ ಕಾಂಟ್ಯಾಕ್ಟ್ ಹಾಗೂ 15 ಸೆಕೆಂಡರಿ ಕಾಂಟ್ಯಾಕ್ಟ್‌ಗಳು ಪತ್ತೆಯಾಗಿದ್ದು, ಇವರ ಸ್ಯಾಂಪಲ್‌ಗಳನ್ನ ಟೆಸ್ಟಿಂಗ್ ಮಾಡಲು ಕಳುಹಿಸಲಾಗಿದೆ. ಸದ್ಯಕ್ಕೆ 20 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ ಎಂದು ಮಾಹಿತಿ ನೀಡಲಾಗಿದೆ. ಅಂದ್ಹಾಗೆ ಭಾರತದಲ್ಲಿ ಈವರೆಗೂ ಒಟ್ಟು 36 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.