ಶಿವಮೊಗ್ಗ : ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಎನ್‌ಎಸ್‌ಎಸ್ ಸ್ವಯಂ ಸೇವಕರಿಗಾಗಿ ಯೋಗದ ಕುರಿತು ಒಂದು ದಿನದ ಕಾರ್ಯಗಾರ ನಡೆಯಿತು.
ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕುವೆಂಪು ರಂಗಮಂದಿರದ ಒಳಾಂಗಣ ಕ್ರೀಡಾಂಗಣದಲ್ಲಿ ಈ ಕಾರ್ಯಗಾರ ನಡೆಯಿತು. ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ನಾಗರಾಜ್ ಪರಿಸರ ಸ್ವಯಂ ಸೇವಕರಿಗೆ ಯೋಗವನ್ನು ಪ್ರಾಯೋಗಿಕವಾಗಿ ಮಾಡಿಸುವ ಮೂಲಕ ಕಾರ್ಯಗಾರವನ್ನು ನೆಡೆಸಿಕೊಟ್ಟರು.