ದೆಹಲಿ : ಶಿವಮೊಗ್ಗದ ಹೊಸಳ್ಳಿಯ ಗಮಕ ಕಲಾವಿದ ಹೆಚ್.ಆರ್. ಕೇಶವಮೂರ್ತಿ 2022 ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ದೆಹಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿದರು.
ಇವರ ಜೊತೆಗೆ ಕರ್ನಾಟಕದಿಂದ ಕೃಷಿ ಸಾಧಕ ಅಮೈ ಮಹಾಲಿಂಗ ನಾಯ್ಕ್ ಹಾಗೂ ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಅಬ್ದುಲ್ ಖಾದರ್ ಅವರು ಕೂಡ ಪ್ರಶಸ್ತಿಯನ್ನು ಸ್ವೀಕರಿಸಿದರು.