ಶಿಕಾರಿಪುರ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಕಿಚ್ಚು ಹಚ್ಚಿದ ಭೂಮಿಯಾಗಿದೆ. ಇಂತಹ ಸ್ವಾತಂತ್ರ್ಯ ಹೋರಾಟಗಾರನಿಗೆ ಅಪಮಾನ ಮಾಡಿರುವುದು ಈಸೂರು ದಂಗೆಗೂ ಅಪಮಾನ ಮಾಡಿದಂತಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಬಳಗ ಮತ್ತು ಹಾಲುಮತ ಮಹಾಸಭಾದ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಗೊಳ್ಳಿ ರಾಯಣ್ಣರಿಗೆ ಗೌರವ ಸಲ್ಲಿಸಲು ಆದೇಶ ಹೊರಡಿಸಿದ್ದಾರೆ. ಅದೇ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸ್ವಕ್ಷೇತ್ರ ಶಿಕಾರಿಪುರದಲ್ಲಿ ದೇಶಭಕ್ತ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸಿರುವುದು ಖಂಡನೀಯ.
ಇದಕ್ಕೆ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ತಾಲೂಕು ಆಡಳಿತ ಕ್ಷಮೆಯಾಚಿಸಬೇಕು. ಅಲ್ಲದೆ ರಾಯಣ್ಣನವರ ಮೂರ್ತಿಯನ್ನು ಅದೇ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.